Kannada NewsKarnataka NewsLatest

*ತಾಯಿ ಜೊತೆ ಮಾತನಾಡುತ್ತಿದ್ದಾಗಲೇ ಬ್ರೇನ್ ಸ್ಟ್ರೋಕ್ ಆಗಿ ಟೆಕ್ಕಿ ಯುವತಿ ಸಾವು*

ಪ್ರಗತಿವಾಹಿನಿ ಸುದ್ದಿ: ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ ಆಗಿ ಚಿಕಿತ್ಸೆ ಫಲಕಾರಿಯಾಗದೇ ಟೆಕ್ಕಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಶ್ವೇತಾ (25) ಮೃತ ಟೆಕ್ಕಿ. ಏ.25ರ ಶನಿವಾರ ಕೆಲಸ ಮುಗಿಸಿ ಮನೆಗೆ ಬಂದ ಶ್ವೇತಾ ತಾಯಿಯ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಏಕಾಏಕಿ ಕುಸಿದು ಬಿದ್ದು ಮಾತನಾಡಲಾರದ ಸ್ಥಿತಿ ತಲುಪಿದ್ದರು. ಬೆಂಗಳೂರಿಗೆ ಕರೆತರುವಾಗಲೇ ಶ್ವೇತಾ ಕೋಮಾಗೆ ಜಾರಿದ್ದರು.

ಬ್ರೇನ್ ನಿಷ್ಕ್ರಯಗೊಂಡಿ಼ದಾಗಿ ವೈದ್ಯರು ಹೇಳಿದ್ದರು. ಪೋಷಕರು ಮಗಳ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಶ್ವೇತಾ ಮೃತಪಟ್ಟಿದ್ದಾರೆ. ಹೀಗಾಗಿ ಅಂಗಾಂಗ ದಾನ ನಡೆಸಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಒಬ್ಬಳೇ ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button