Latest

*ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಾಹಸ ಸಿಂಹ, ಮೇರು ನಟ ಡಾ.ವಿಷ್ಣುವರ್ಧನ್ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.

ಡಾ. ವಿಷ್ಣುವರ್ಧನ್ ಪ್ರತಿಷ್ಠಾನ (ರಿ) ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮೈಸೂರಿನ ಹೆಚ್.ಡಿ. ಕೋಟೆ ತಾಲೂಕಿನ ಹಾಲಾಳು ಗ್ರಾಮ, ಉದ್ಬೂರು ಕ್ರಾಸ್ ಬಳಿ ನಿರ್ಮಾಣಗೊಂಡಿರುವ ಡಾ.ವಿಷ್ಣುವರ್ಧನ್ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ವಿಷ್ಣುವರ್ಧನ್ ಅವರ 7 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

Home add -Advt

ಈ ವೇಳೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ್, ಶಾಸಕ ಜಿ.ಟಿ. ದೇವೇಗೌಡ, ಶಾಸಕ ಎಲ್.ನಾಗೇಂದ್ರ, ರಾಮದಾಸ್, ಸಂಸದ ಪ್ರಾತಾಪ್ ಸಿಂಹ, ಮತ್ತಿತರರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ವಿಷ್ಣುವರ್ಧನ್ ಹಲವು ಭಾಷೆಗಳಲ್ಲಿ ಅಭಿನಯಿಸಿರುವ ಬಹುಭಾಷಾ ನಟ ಮಾತ್ರವಲ್ಲ ಅವರೊಬ್ಬ ಮೇರು ನಟರಾಗಿದ್ದರು. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಬೇಕು ಎಂಬ ಅಭಿಮಾನಿಗಳ ಹಲವು ವರ್ಷಗಳ ಒತ್ತಾಸೆ ಈಗ ಇಡೇರಿದೆ. 5ಎಕರೆ ಸ್ಥಳದಲ್ಲಿ 11 ಕೋಟಿ ವೆಚ್ಚದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಸ್ಮಾರಕ ಪ್ರವಾಸಿ ತಾಣವಾಗಬೇಕಿದೆ ಎಂದು ಹೇಳಿದರು.

*ಆರೋಗ್ಯ ಸಚಿವರ ಮೇಲೆ ASIಯಿಂದಲೇ ಗುಂಡಿನ ದಾಳಿ*

https://pragati.taskdun.com/odish-health-minister-nabadasasishootout/

Related Articles

Back to top button