Latest

ಮಹಿಳೆಯರಲ್ಲಿ ಹೆಚ್ಚಾಗುತ್ತಿದೆ ಈ ಸಮಸ್ಯೆ…

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಹಾಗೂ ಯುವತಿಯರಲ್ಲಿ ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಮುಖ್ಯವಾಗಿ ರಾಜಧಾನಿ ಬೆಂಗಳೂರು ಸ್ತನ ಕ್ಯಾನ್ಸರ್ ಪ್ರಕರಣದಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ.

ಇತ್ತೀಚಿನ ದಿನಗಳಲ್ಲಿ ಯುವತಿಯರು, ಮಹಿಳೆಯರು ಮಧ್ಯಪಾನ ಹಾಗೂ ಧೂಮಪಾನದಂತಹ ವ್ಯಸನಗಳ ದಾಸರಾಗುತ್ತಿದ್ದು, ಇಂತಹವರಲ್ಲಿಯೇ ಹೆಚ್ಚಾಗಿ ಸ್ತನ ಕ್ಯಾನ್ಸರ್ ಕಂಡು ಬರುತ್ತಿದೆ ಎನ್ನಲಾಗಿದೆ.

ಆಧುನಿಕ ಜೀವನ ಶೈಲಿ, ಪಾಶ್ಚಿಮಾತ್ಯ ಡಯಟ್ ಪ್ಲಾನ್, ಹೊಸ ರೀತಿಯ ಡಯಟ್ ಪ್ರಯೋಗಗಳು ಸ್ತನ ಕ್ಯಾನ್ಸರ್ ಗೆ ಕಾರಣವಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಕಿದ್ವಾಯಿ ಆಸ್ಪತ್ರೆ ಸ್ತನ ಕ್ಯಾನ್ಸರ್ ಕುರಿತು ನೀಡಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ತಡವಾದ ಋತುಬಂಧ, ಅತಿ ಬೇಗ ಋತುಸ್ರಾವ, ಗರ್ಭ ನಿರೋಧಕ ಬಳಕೆ, ಹಾರ್ಮೋನ್ ಬದಲಾವಣೆ, ಬೊಜ್ಜು, ತೂಕ ಹೆಚ್ಚಾಗುವುದು, ಕೊಬ್ಬಿನ ಅಂಶ ಮೊದಲಾದವು ಸ್ತನ ಕ್ಯಾನ್ಸರ್ ಗೆ ಕಾರಣವಾಗುತ್ತದೆ.

ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 9000-10000 ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಬೆಂಗಳೂರಿನ 1688 ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪತ್ತೆಯಾಗಿದೆ. ರಾಜ್ಯದಲ್ಲಿ ಸರಾಸರಿ ಒಂದು ಲಕ್ಷ ಮಹಿಳೆಯರಲ್ಲಿ 24ರಿಂದ 26 ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button