Belagavi NewsBelgaum NewsKannada NewsKarnataka News

ಠರಾವು ಪ್ರತಿಗೆ ಲಂಚ: ಉಪ ಪ್ರಾಚಾರ್ಯ ಬಂಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಳಿಕೆ ರಜೆ ನಗದೀಕರಣ ಮಾಡಲು ಠರಾವು ಪ್ರತಿ ನೀಡಿದ್ದಕ್ಕಾಗಿ ಲಂಚ ಪಡೆಯುತ್ತಿದ್ದ ಬೆಳಗಾವಿಯ ಶ್ರಿ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ಬೆಳಗಾವಿಯ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ, ಪ್ರೌಢ ಶಾಲಾ ವಿಭಾಗದ ಉಪಪ್ರಾಚಾರ್ಯ ಕೆ. ಬಿ. ಹಿರೇಮಠ ರವರನ್ನು ಬಂಧಿಸಲಾಗಿದೆ.

ಫಿರ‍್ಯಾದಿದಾರರಾದ ರವೀಂದ್ರ ರಾಜಾರಾಮ ಮದಾಳೆ ಮುಖ್ಯೋಪಾಧ್ಯಾಯರು ಬಸವೇಶ್ವರ ಪ್ರೌಢ ಶಾಲೆ ನಾಗನೂರ ತಾಃ ಬೈಲಹೊಂಗಲ ರವರ ಗಳಿಕೆ ರಜೆ ನಗದೀಕರಣ ಮಾಡುವದಕ್ಕೆ ಆಡಳಿತ ಮಂಡಳಿಯಿಂದ ಠರಾವು ಪ್ರತಿಯನ್ನು ನೀಡಿದ್ದಕ್ಕಾಗಿ ಗಳಿಕೆ ರಜೆಯ ಹಣದ ನಗದೀಕರಣ ಮೊತ್ತದ ಶೇ. ೨೫% ರಂತೆ ಒಟ್ಟು ೧೩೧೫೦/- ರೂಪಾಯಿಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟು, ಈ ಬಗ್ಗೆ ಲಂಚ ಕೊಡಲು ಮನಸ್ಸಿಲ್ಲದೇ ಫಿರ‍್ಯಾದಿದಾರರು ಆಪಾದಿತ ಅಧಿಕಾರಿಯ ಲಂಚ ಬೇಡಿಕೆಯ ಬಗ್ಗೆ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಠಾಣೆ ಬೆಳಗಾವಿಯಲ್ಲಿ ಪ್ರಕರಣ ಸಂಖ್ಯೆ ೦೧/೨೦೨೪ ಕಲಂ ೭(ಬಿ) ಪಿಸಿ ಕಾಯ್ದೆ ೧೯೮೮ (ತಿದ್ದುಪಡಿ- ೨೦೧೮) ರಡಿಯಲ್ಲಿ ದಾಖಲಿಸಿಕೊಳ್ಳಲಾಗಿದೆ.
ಈ ಪ್ರಕರಣದ ಹಿನ್ನೆಲೆಯಲ್ಲಿ ಆಪಾದಿತ ಅಧಿಕಾರಿಯು ದಿನಾಂಕಃ ೨೩/೦೧/೨೦೨೪ ರಂದು ತನ್ನ ಶ್ರಿ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ಬೆಳಗಾವಿಯ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ, ಪ್ರೌಢ ಶಾಲಾ ವಿಭಾಗದ ಕಾರ್ಯಾಯಲಯದಲ್ಲಿ ಫಿರ್ಯಾದಿಯಿಂದ ಲಂಚದ ಹಣವನ್ನು ಸ್ವೀಕರಿಸುವ ವೇಳೆ ಯಶಸ್ವಿಯಾಗಿ ಟ್ರ್ಯಾಪ್ ಮಾಡಿದ್ದು, ಉಪಪ್ರಾಚಾರ್ಯ ಕೆ. ಬಿ. ಹಿರೇಮಠರವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ.

ಟ್ರ್ಯಾಪ್ ಕಾರ್ಯಾಚರಣೆಯನ್ನು ಪೊಲೀಸ್ ಅಧೀಕ್ಷಕರಾದ ಹನುಮಂತರಾಯ ಐಪಿಎಸ್ ಹಾಗೂ ಬಿ. ಎಸ್. ಪಾಟೀಲ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಲೋಕಾಯುಕ್ತ ಬೆಳಗಾವಿ ರವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯಾದ ಆರ್. ಎಲ್. ಧರ್ಮಟ್ಟಿ ಪೊಲೀಸ್ ಇನ್ಸ್‌ಪೆಕ್ಟರ್, ಅಜೀಜ್ ಕಲಾದಗಿ ಪೊಲೀಸ್ ಇನ್ಸಪೆಕ್ಟರ್, ಅನ್ನಪೂರ್ಣ ಹುಲಗೂರ ಪೊಲೀಸ್ ಇನ್ಸಪೆಕ್ಟರ್, ಲೋಕಾಯುಕ್ತ ಬೆಳಗಾವಿ ಹಾಗೂ ಸಿಬ್ಬಂದಿಗಳಾದ ರವಿ ಮಾವರಕರ, ಗಿರಿಶ್ ಪಾಟೀಲ, ವಿಠಲ ಬಸಕ್ರಿ, ಸಂತೋಷ ಬೆಡಗ, ಹಾಗೂ ತಂಡದವರಿಂದ ಕೈಗೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button