Kannada NewsKarnataka NewsUncategorized
3 ಕೋಟಿ ರೂ ವೆಚ್ಚದಲ್ಲಿ ಸೇತುವೆ: ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪೂಜೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಗ್ರಾಮದಲ್ಲಿರುವ ಬಾಚಿ -ರಾಯಚೂರ ರಸ್ತೆಗೆ ಸಂಪರ್ಕ ಕಲ್ಪಿಸುವ ನೂತನ ಸೇತುವೆ (ಬ್ರಿಡ್ಜ್) ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 3 ಕೋಟಿ ರೂ,ಗಳನ್ನು ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ನೂತನ ಸೇತುವೆ ನಿರ್ಮಾಣದ ಕಾಮಗಾರಿಗಳಿಗೆ ಮಂಗಳವಾರ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಭಾಗದ ಜನರ ಬಹುದಿನದ ಬೇಡಿಕೆಯ ಹಿನ್ನೆಲೆಯಲ್ಲಿ ಕಾಮಗಾರಿಗೆ ಮಂಜೂರಿ ಪಡೆಯಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಜನರೂ ಕಾಮಗಾರಿಯ ಮೇಲೆ ನಿಗಾ ಇಡಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ವಿನಂತಿಸಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ನಿರ್ಮಲಾ ಕಲಕಾಂಬ್ಕರ್, ಬಾಗಣ್ಣ ನರೋಟಿ, ಬಾಹು ಗಡ್ಕರಿ, ಪರುಶರಾಮ ತೋರೆ, ಯಲ್ಲಪ್ಪ ಕಲಕಾಂಬ್ಕರ್, ಸುಭಾಷ ನಾಯ್ಕ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ