
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ್ ಗ್ರಾಮದಲ್ಲಿ ನೀರಾವರಿ ಇಲಾಖೆಯ ಅನುದಾನದಡಿ ಸುಮಾರು ಎರಡು ಕೋಟಿ ರೂ,ಗಳ ವೆಚ್ಚದಲ್ಲಿ ಎರಡು ಪ್ರತ್ಯೇಕ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ನಡೆಯುತ್ತಿದ್ದು, ಹಿಂದುಳಿದಿದ್ದ ಕ್ಷೇತ್ರವೀಗ ಮಾದರಿಯಾಗುವತ್ತ ಮುನ್ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ