
ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದ ಪರಿಣಾಮ 7 ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದಿದೆ.
ಮಲ್ಲಿಪಾಡಿ ರಸ್ತೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಸೇತುವೆಯ ಕೊನೆಯ ಹಂತದ ಕ್ರಾಂಕ್ರಿಟ್ ಮಿಕ್ಸ್ ಹಾಕುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 7 ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ