Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಸೇತುವೆ ಕುಸಿತ: ವಾಹನ ಸಂಚಾರ ಬಂದ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಘಟಪ್ರಭಾ ಪಟ್ಟಣದ ಹೊರವಲಯದಲ್ಲಿರುವ ಹಳೆಯ ಸೇತುವೆ ಕುಸಿತದಿಂದ ವಾಹನ ಸಂಚಾರ ಬಂದ್ ಮಾಡಲಾಗಿದೆ. 

72 ವರ್ಷಗಳ ಹಳೆಯ ಸೇತುವೆ ಕುಸಿತಗೊಂಡಿದ್ದು, ವಾಹನ ಸವಾರರ ಹಿತದೃಷ್ಠಿಯಿಂದ ಸೇತುವೆ ಮೇಲೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. 1954ರಲ್ಲಿ ನಿರ್ಮಾಣಗೊಂಡ ಸುಮಾರು 72 ವರ್ಷಗಳ ಹಳೆಯ ಸೆತುವೆ ಕುಸಿತದಿಂದ ಭಾರೀ ಅನಾಹುತ ತಪ್ಪಿದೆ. ಸದ್ಯಕ್ಕೆ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದ್ದರಿಂದ ಘಟಪ್ರಭಾ ಪಟ್ಟಣಕ್ಕೆ  ಸಂಪರ್ಕ ಕಟ್ ಆಗಿದೆ. 

ಘಟನಾ ಸ್ಥಳಕ್ಕೆ ಅಧಿಕಾರಿಗಳು  ಭೇಟಿ, ಪರಿಶೀಲನೆ  ನಡೆಸಿದ್ದಾರೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸೇತುವೆ ಸುತ್ತಲು ಬ್ಯಾರಿಕೇಡ್ ಅಳವಡಿಸಲಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button