Karnataka News
*ಮಹಿಳಾ ಸಿಬ್ಬಂದಿಗೆ ಬ್ರಿಮ್ಸ್ ಸೂಪರ್ ವೈಸರ್ ನಿಂದ ಕಿರುಕುಳ: ಮಹಿಳಾ ಆಯೋಗದ ಅಧ್ಯಕ್ಷೆಗೆ ದೂರು ನೀಡಿದ ನೊಂದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಸಿಬ್ಬಂದಿಗೆ ಬ್ರಿಮ್ಸ್ ಆಸ್ಪತ್ರೆ ಸೂಪರ್ ವೈಸರ್ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದ್ದು, ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರಿಗೆ ನೊಂದ ಮಹಿಳಾ ಸಿಬ್ಬಂದಿ ದೂರು ನೀಡಿದ್ದಾರೆ.
ಬ್ರಿಮ್ಸ್ ಆಸ್ಪತ್ರೆ ಸೂಪರ್ ವೈಸರ್ ಪ್ರಕಾಶ್ ಮಾಳಗೆ ವಿರುದ್ಧ ಮಹಿಳೆ ಕಿರುಕುಳ ಆರೋಪ ಮಾಡಿದ್ದಾರೆ. ತನ್ನ ಮಾತು ಕೇಳದಿದ್ದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಕೆಲಸಕ್ಕೆ ಬಂದರೂ ಹಾಜರಾತಿ, ಸಂಬಳ ನೀಡದೇ ತೊಂದರೆ ಕೊಡುತ್ತಿದ್ದಾರೆ ತನಗೆ ನ್ಯಾಯ ಕೊಡಿಸುವಂತೆ ಮಹಿಳಾ ಸಿಬ್ಬಂದಿ ನಾಗಲಕ್ಷ್ಮೀ ಕಾಲಿಗೆ ಬಿದ್ದು ಕಣ್ಣೀರಿಟ್ಟಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಬ್ರಿಮ್ಸ್ ನಿರ್ದೇಶಕರಿಗೆ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ