Latest

ಬ್ರಿಟನ್ ಪ್ರಧಾನಿಗೂ ಕೊರೋನಾ ಸೋಂಕು ದೃಢ

ಲಂಡನ್ -:  ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸ್‌ನ್‌ಗೂ ಕೊರೊನಾ ವೈರಸ್ ಸೋಂಕು ತಗುಲಿದೆ.  ಈ ವಿಷಯವನ್ನು ಸ್ವತಃ ಅವರೇ ದೃಢಪಡಿಸಿದ್ದಾರೆ.

ನನಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ.  ನಾನು ಸೆಲ್ಪ್ ಐಸೋಲೇಷನ್‌ ಮಾಡಿಕೊಳ್ಳಲಿದ್ದು,  ವಿಡಿಯೋ ಕಾನ್ಪರೆನ್ಸ್ ಮೂಲಕ ಸರ್ಕಾರವನ್ನು ನಿಭಾಯಿಸಲಿದ್ದೇನೆ” ಎಂದು ಅವರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹಾಕಿದ್ದಾರೆ.

ಬ್ರಿಟನ್‌ನಲ್ಲಿ ಸುಮಾರು 10 ಸಾವಿರ ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. 528 ಜನರು ಬಲಿಯಾಗಿದ್ದಾರೆ. 137 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ದೇಶವಾಸಿಗಳು ಮನೆಯಲ್ಲಿ ಇರಿ ಆರೋಗ್ಯವಾಗಿ ಇರಿ. ನಾನು ದೇಶಕ್ಕೆ ಅಂಟಿರುವ ಕೊರೋನಾ ನಿಯಂತ್ರಣಕ್ಕೆ ಎಲ್ಲ ರೀತಿಯ ಪ್ರಯತ್ನ ಮುಂದುವರಿಸುತ್ತೇನೆ. ಯಾರೂ ಭಯಪಡಬೇಕಿಲ್ಲ ಎಂದು ಜನರಿಗೆ ಮನವಿ ಮಾಡಿಕೊಂಡಿದ್ದಾರೆ.

Home add -Advt

Related Articles

Back to top button