Latest

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

ಪ್ರಗತಿವಾಹಿನಿ ಸುದ್ದಿ; ಲಂಡನ್: ಬ್ರಿಟನ್ ಪ್ರಧಾನಿ ಹುದ್ದೆಗೆ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ್ದಾರೆ. ಹಗರಣಗಳ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಣಿದು ಪ್ರಧಾನಿ ಹುದ್ದೆಗೆ ಬೋರಿಸ್ ಜಾನ್ಸನ್ ರಾಜೀನಾಮೆ ಘೋಷಿಸಿದ್ದಾರೆ.

ಲಂಡನ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಬೋರಿಸ್ ಜಾನ್ಸನ್, ತಾವು ಬ್ರಿಟನ್ ಪ್ರಧಾನಿ ಹುದ್ದೆ ತೊರೆಯುತ್ತಿರುವುದಾಗಿ ಘೋಷಿಸಿದರು. ಬ್ರಿಟನ್ ಸರ್ಕಾರದ ವಿರುದ್ಧ ಸಚಿವರು ಸಿಡಿದೆದ್ದಿದ್ದು. ಎರಡು ದಿನಗಳಲ್ಲಿ 40ಕ್ಕೂ ಹೆಚ್ಚು ಸಚಿವರು ರಾಜೀನಾಮೆ ನೀಡಿದ್ದರು. ಬ್ರಿಟನ್ ಸರ್ಕಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇನ್ಫೊಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಅಳಿಯ ಋಷಿ ಸುನಕ್ ಹಾಗೂ ಸಾಜಿದ್ ಜಾವಿದ್ ಕೂಡ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಂದ ಅಂತರ ಕಾಯ್ದುಕೊಂಡಿದ್ದರು.

ತಮ್ಮ ವಿರುದ್ಧ 40ಕ್ಕೂ ಹೆಚ್ಚು ಸಚಿವರಿಂದ ಅವಿಶ್ವಾಸ ವ್ಯಕ್ತವಾದ ಬೆನ್ನಲ್ಲೇ ಒತ್ತಡಕ್ಕೆ ಮಣಿದು ಬೋರಿಸ್ ಜಾನ್ಸನ್ ಕೊನೆಗೂ ರಾಜೀನಾಮೆ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಬೋರಿಸ್ ಜಾನ್ಸನ್, ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ದೇಶವನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯಲು ಸಾಕಷ್ಟು ಶ್ರಮಿಸಿದ್ದೇನೆ. ಶೀಘ್ರವೇ ಹೊಸ ನಾಯಕನ ಆಯ್ಕೆ ಮಾಡಲಾಗುವುದು. ಹೊಸ ಪ್ರಧಾನಿ ಆಯ್ಕೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
‘ಕಾಳಿ’ ಬೆನ್ನಲ್ಲೇ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ ಲೀನಾ ಮಣಿ ಮೇಕಳೈ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button