Latest

82 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರಿನಾ ಸೋಂಕು ಮುಂದುವರೆದಿದು, ಕಳೆದ 24 ಗಂಟೆಯಲ್ಲಿ 45,230 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 82,29,313ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 496 ಸೋಂಕಿತರು ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,22,607ಕ್ಕೆ ಏರಿಕೆಯಾಗಿದೆ.

Home add -Advt

ಈ ವರೆಗೆ ದೇಶದಲ್ಲಿ 75,44,798 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 5,61,908 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 53,285 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನದಲ್ಲಿ 8.55 ಲಕ್ಷ ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ.

Related Articles

Back to top button