Election NewsKannada NewsKarnataka NewsNationalTravelWorld

*ಭಾರತಕ್ಕೆ ಆಗಮಿಸಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್*

ಪ್ರಗತಿವಾಹಿನಿ ಸುದ್ದಿ: ಯುಕೆ ಹಾಗೂ ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಇಂದು ಮುಂಬೈಗೆ ಬಂದಿಳಿದಿದ್ದಾರೆ. ಅವರನ್ನು ಮಹಾರಾಷ್ಟ್ರ ಸಿಎಂ ಬರಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ 5.40 ಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.  ಗುರುವಾರ ಬೆಳಗ್ಗೆ 10 ಗಂಟೆಗೆ ಮುಂಬೈ ರಾಜಭವನದಲ್ಲಿ ಪ್ರಧಾನಿ ಮೋದಿ ಅವರು ಸ್ಟಾರ್ಮರ್ ಅವರೊಂದಿಗೆ ಸಭೆ ನಡೆಸಲಿದ್ದಾರೆ.

ಈ ಉನ್ನತ ಮಟ್ಟದ ಚರ್ಚೆಯು ವ್ಯಾಪಾರ, ತಂತ್ರಜ್ಞಾನ ಮತ್ತು ಹವಾಮಾನ ಕ್ರಮ ಸೇರಿದಂತೆ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವತ್ತ ಗಮನಹರಿಸುವ ನಿರೀಕ್ಷೆಯಿದೆ. 

ಈ ಭೇಟಿಯಲ್ಲಿ ಸ್ಟಾರ್ಮರ್ 100 ಕ್ಕೂ ಹೆಚ್ಚು ವ್ಯಾಪಾರ ಮುಖಂಡರು, ವಿಶ್ವವಿದ್ಯಾಲಯದ ಮುಖ್ಯಸ್ಥರು ಮತ್ತು ಸಾಂಸ್ಕೃತಿಕ ವ್ಯಕ್ತಿಗಳ ದೊಡ್ಡ ನಿಯೋಗದ ನೇತೃತ್ವ ವಹಿಸಿದ್ದಾರೆ.

Home add -Advt

Related Articles

Back to top button