
ಪ್ರಗತಿವಾಹಿನಿ ಸುದ್ದಿ, ತಿರುವನಂತನಪುರ: ಬಾಲಕಿಯರ ಎದುರು ಗುಪ್ತಾಂಗ ಪ್ರದರ್ಶಿಸಿದ ಆರೋಪದಡಿ ಮಲೆಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.
ಅಯ್ಯಂತೊಳೆ ಎನ್ ಎಸ್ ಪಾರ್ಕ್ ನಲ್ಲಿ ಜು.4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ನಿಂತಿದ್ದ ಸಂದರ್ಭದಲ್ಲಿ ಕಾರಿನಿಂದ ಕೆಳಗಿಳಿದ ಶ್ರೀಜಿತ್ ರವಿ ಗುಪ್ತಾಂಗ ಪ್ರದರ್ಶಿಸಿದರೆನ್ನಲಾಗಿದೆ. ಈ ಕುರಿತು ಮಕ್ಕಳ ಪೋಷಕರು ನೀಡಿದ ದೂರಿನನ್ವಯ ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ಶ್ರೀಜಿತ್ ರವಿ ಅವರನ್ನು ಬಂಧಿಸಿದ್ದಾರೆ.
ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಾವಳಿಗಳನ್ನು ಪೊಲೀಸರು ಪಡೆದಿದ್ದು ತನಿಖೆ ಕೈಗೊಂಡಿದ್ದಾರೆ. 2016ರಲ್ಲಿ ಇಂಥದ್ದೇ ಪ್ರಕರಣದಲ್ಲಿ ಶ್ರೀಜಿತ್ ರವಿ ಮೇಲೆ ಪ್ರಕರಣ ದಾಖಲಾಗಿ ಬಂಧನಕ್ಕೊಳಗಾಗಿದ್ದರು.
ಅವ್ಯಾಹತ ಮಳೆಗೆ ಗುಡ್ಡ ಕುಸಿತ: ಮೂವರು ಕಾರ್ಮಿಕರ ಸಾವು