*ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಸ್ವಾತಿಕ್ ಪಾಟೀಲ್‌ಗೆ ಕಂಚಿನ ಪದಕ; ಕರ್ನಾಟಕಕ್ಕೆ ಹೆಮ್ಮೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್–2026ರ ಪುರುಷರ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್ (SB9) ಈಜು ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ಮುತಗಾ ಗ್ರಾಮದ ಸ್ವಾತಿಕ್ ಪಾಟೀಲ್ ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಫೈನಲ್ ಸ್ಪರ್ಧೆಯಲ್ಲಿ 1 ನಿಮಿಷ 13.77 ಸೆಕೆಂಡ್‌ಗಳಲ್ಲಿ ಗುರಿ ತಲುಪಿದ ಸ್ವಾತಿಕ್, ಅಂತಾರಾಷ್ಟ್ರೀಯ ಕ್ರೀಡಾ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಅವರ ಸಾಧನೆಗೆ ರಾಜ್ಯದಾದ್ಯಂತ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.
ಸ್ವಾತಿಕ್ ಅವರ ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ಕ್ರೀಡೆಯ ಮೇಲಿನ ಬದ್ಧತೆ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ. ಕರ್ನಾಟಕದ ಕ್ರೀಡಾಪಟುಗಳ ಸಾಧನೆಗೆ ಅಗತ್ಯ ಪ್ರೋತ್ಸಾಹ ಮತ್ತು ಬೆಂಬಲ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಅಭಿನಂದನಾ ಸಂದೇಶದಲ್ಲಿ ತಿಳಿಸಲಾಗಿದೆ.
ಸ್ವಾತಿಕ್ ಅವರ ಕ್ರೀಡಾ ಪಯಣ ಇನ್ನಷ್ಟು ಯಶಸ್ಸಿನಿಂದ ಕೂಡಿರಲಿ, ಮುಂಬರುವ ಸ್ಪರ್ಧೆಗಳಲ್ಲಿ ಮತ್ತಷ್ಟು ಪದಕಗಳನ್ನು ಗೆಲ್ಲಲಿ ಎಂದು ಹಾರೈಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




