ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹಕ್ಕೆ ಅಣ್ಣನೇ ತಂಗಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದೆ.
ಐವನ್ ಬಾನು ಕೊಲೆಯಾಗಿರುವ ಮಹಿಳೆ. ಫರ್ಮಾನ್ ಫಾಷಾ ತಂಗಿಯನ್ನೇ ಕೊಂದ ಅಣ್ಣ. ಕೌಟುಂಬಕ ಕಲಹದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಣ್ಣ-ತಂಗಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ಫರ್ಮಾನ್ ಪಾಷಾ ಚಾಕುವಿನಿಂದ ತಂಗಿಯ ಕತ್ತು ಕುಯ್ದು ಕೊಲೆ ಮಾಡಿದ್ದಾನೆ.
ತಪ್ಪಿಸಲು ಬಂದ ಅತ್ತಿಗೆ ಹಾಗೂ ತಂದೆಯ ಮೇಲೂ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಅತ್ತಿಗೆ ಹಾಗೂ ತಂದೆ ಇಬ್ಬರೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ