
ಪ್ರಗತಿವಾಹಿನಿ ಸುದ್ದಿ: ಅಣ್ಣ-ತಂಗಿ ಇಬ್ಬರೂ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದಿದೆ.
ಅಣ್ಣ ಪ್ರಭು (25) ಹಾಗೂ ತಂಗಿ ನವ್ಯಾ(23) ಮೃತ ದುರ್ದೈವಿಗಳು. ಮೃತರು ಶಿಡ್ಲಘಟ್ಟ ನಗರದ ಪ್ರೇಮನಗರ ನಿವಾಸಿಗಳು. ಇತ್ತೀಚೆಗೆ ಪ್ರಭು ಹಾಗೂ ನವ್ಯಾ ತಾಯಿ ಸಾವನ್ನಪ್ಪಿದ್ದರು. ಇದೇ ಕಾರಣಕ್ಕೆ ಮಾನಸಿಕವಾಗಿ ನೊಂದು ಅಣ್ಣ-ತಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ