Advertisement -Home Add
Crease wise (28th Jan)
KLE1099 Add

ಕೋವಿಡ್ ಆಸ್ಪತ್ರೆಯಲ್ಲಿ ಮತ್ತೊಂದು ಅಗ್ನಿ ದುರಂತ; 18 ಜನರ ಸಾವು

ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಅಲ್ಲಿನ ಸರಕಾರ ಆದೇಶಿಸಿದೆ

ಪ್ರಗತಿವಾಹಿನಿ ಸುದ್ದಿ, ಅಹ್ಮದಾಬಾದ್ – ಗುಜರಾತ್ ನ ಭರೂಚ್ ನಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ 18 ಜನರು  ಸಾವಿಗೀಡಾಗಿದ್ದಾರೆ.

ಪಟೇಲ್ ವೆಲ್ಫೇರ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. 40ಕ್ಕೂ ಹೆಚ್ಚು ಅಂಬುಲೆನ್ಸ್ ನಲ್ಲಿ ರೋಗಿಗಳನ್ನು ಸ್ಥಳಾಂತರಿಸುವ ಪ್ರಯತ್ನ ನಡೆಯಿತು. 50ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಯಿತು. ಆದರೆ ಸುಮಾರು 12 ರೋಗಿಗಳು ಹಾಗೂ ಕೆಲವು ಸಿಬ್ಬಂದಿ ಸೇರಿ 18 ಜನರು ಸಾವಿಗೀಡಾಗಿದ್ದಾರೆ. ಇನ್ನೂ ಹಲವರು ಗಂಭೀರ ಗಾಯಗೊಂಡಿದ್ದಾರೆ.

ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಅಲ್ಲಿನ ಸರಕಾರ ಆದೇಶಿಸಿದೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದೆ.

 

ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಕೋವಿಡ್ ಗೆ ಬಲಿ