Beereshwara add 9
KLE1099 Add

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ

24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರೆಷ್ಟು?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಆತಂಕದ ನಡಿವೆ ನಿಟ್ಟುಸಿರು ಬಿಡುವ ಸುದ್ದಿ ಇಲ್ಲಿದೆ. ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಡಿಢೀರ್ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 2,55,874 ಜನರಲ್ಲಿ ಸೋಂಕು ಪತ್ತೆಯಾಗಿದೆ.

ದಿನದ ಪಾಸಿಟಿವಿಟಿ ರೇಟ್ ನಲ್ಲೂ ಇಳಿಕೆ ಕಂಡಿದ್ದು, ಶೇ.15.52ಕ್ಕೆ ಇಳಿಕೆಯಾಗಿದೆ ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 614 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 489848 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2236842 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 267753 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಭೀಕರ ರಸ್ತೆ ಅಪಘಾತ; ಬಿಜೆಪಿ ಶಾಸಕನ ಪುತ್ರ ಸೇರಿ 7 ವಿದ್ಯಾರ್ಥಿಗಳು ದುರ್ಮರಣ

You cannot copy content of this page