GIT add 2024-1
Laxmi Tai add
Beereshwara 33

ಪ್ರಧಾನಿ ಮೋದಿ ಜನ್ಮದಿನ: KLES ಆಸ್ಪತ್ರೆಯಿಂದ 15 ದಿನ ಹಲವು ವಿದಾಯಕ ಕಾರ್ಯಕ್ರಮ

Prime Minister Modi's birthday: Many programs by KLES Hospital

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ತ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ 15 ದಿನಗಳ ಕಾಲ ಹಲವು ವಿದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮೆಡಿಕಲ್ ಡೈರೆಕ್ಟಕ್ ಡಾ.ಎಂ.ವಿ.ಜಾಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಸೆಪ್ಟಂಬರ್ 17ರಿಂದ ಅಕ್ಟೋಬರ್ 1ರ ವರೆಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆರಂಭವಾಗಿ ನಂತರದಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಹ ನಡೆಯಲಿದೆ. ಚಿಕ್ಕೋಡಿ, ಅಂಕಲಿ, ಗೋಕಾಕ, ಬೈಲಹೊಂಗಲ ಸೇರಿದಂತೆ ಹಲವಾರು ಕಡೆಗಳಲ್ಲಿ ಶಿಬಿರ ನಡೆಯಲಿದೆ. ಆಸ್ಪತ್ರೆಗೆಯ ಬ್ಲಡ್ ಬ್ಯಾಂಕ್ ಉಸ್ತುವಾರಿ ಶ್ರೀಕಾಂತ ವೀರಗಿ ಈ ಸಿಬಿರಗಳ ಜವಾಬ್ದಾರಿ ನಿರ್ವಹಿಸಲಿದ್ದಾರೆ.

Emergency Service

ಇದರ ಜೊತೆಗೆ ಬೇರೆ ಬೇರೆ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ.   ಉಚಿತ ವೈದ್ಯಕೀಯ ಸೌಲಭ್ಯಗಳು ಮತ್ತು ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಲ್ಲಿ ಅಪೌಷ್ಠಿಕಾಂಶ ನಿವಾರಣೆಗೆ ಹಲವು ಯೋಜನೆಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ.

ಒಟ್ಟಾರೆ, ಆಸ್ಪತ್ರೆ ವತಿಯಿಂದ ಸತತ 15 ದಿನಗಳ ಕಾಲ ಹಲವಾರು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಧಾನಿ ಮೋದಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಆಸ್ಪತ್ರೆ ಮುಂದಾಗಿದೆ.

 

https://pragati.taskdun.com/belgaum-news/kle-silver-jubilee-high-school-barsi/

https://pragati.taskdun.com/latest/free-checkupkle-hospitalbelagavi/

Bottom Add3
Bottom Ad 2