P.V.Hegde Add

ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ

ಲಿಂಗರಾಜ ಕಾಲೇಜಿನ ವಿದ್ಯಾರ್ಥಿ ಅಮರನಾಥ ಎಂ.ಡಿ.

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಸ್ವಾಯತ್ತ ಮಹಾವಿದ್ಯಾಲಯದ ಬಿ.ಎ. ಪ್ರಥಮ ವರ್ಷದ ವಿದ್ಯಾರ್ಥಿ ಅಮರನಾಥ ಎಂ.ಡಿ. ಇತ್ತೀಚಿಗೆ ಜನವರಿ ೨ ರಿಂದ ೬ ರವರೆಗೆ ಮೂಡಬಿದರಿಯಲ್ಲಿ ಜರುಗಿದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟದ ೪೦೦ ಮೀಟರ್ ಅಡೆತಡೆ ಓಟದಲ್ಲಿ ಬೆಳ್ಳಿ ಪದಕವನ್ನು ಪಡೆದು ಅದ್ವಿತೀಯ ಸಾಧನೆಯನ್ನು ಮಾಡಿದ್ದಾನೆ.

ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಹಾಗೂ ಆಳ್ವಾಸ ಫೌಂಡೇಶನ್ ಜಂಟಿಯಾಗಿ ಈ ಕ್ರೀಡಾಕೂಟವನ್ನು ಆಯೋಜಿಸಿದ್ದವು. ಅಮರನಾಥ ೫೧.೮ ಸೆಕೆಂಡ್‌ದಲ್ಲಿ ಗುರಿಯನ್ನು ಪೂರೈಸಿ ಸಾಧನೆಯನ್ನು ಮಾಡಿದ್ದಾನೆ.
ಈ ಕ್ರೀಡಾಪಟು ಫೆಬ್ರುವರಿ ತಿಂಗಳಿನ ೨೨ ರಿಂದ ಮಾಚ್ ೩ ವರೆಗೆ ಭುವನೇಶ್ವರದಲ್ಲಿ ಜರುಗಲಿರುವ ಖೆಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ ಕೋರೆಯವರು ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.