ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರವನ್ನು ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವಂತೆ ಕೋರಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ರಾಜ್ಯಪಾಲರಿಗೆ ದೂರು ನೀಡಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟವನ್ನೇ ಅವಮಾನಿಸಿದ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ಪದಚ್ಯುತಗೊಳಿಸಬೇಕು, ಚರ್ಚೆಗೆ ಸದನದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಸದಸ್ಯರು ಕಳೆದ ಎರಡು ದಿನದಿಂದ ಸದನದಲ್ಲಿ ಒತ್ತಾಯಿಸುತ್ತಿದ್ದರೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಾಂಗ್ರೆಸ್ ನಾಯಕರ ಮನವಿಗೆ ಸ್ಪಂದಿಸಿಲ್ಲ.

ಈ ಹಿನ್ನಲೆಯಲ್ಲಿ ಇಂದು ರಾಜ್ಯಪಾಲರಿಗೆ ದೂರು ನೀಡಿರುವ ಕಾಂಗ್ರೆಸ್ ನಿಯೋಗ, ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಸಂವಿಧಾನದ 175ನೇ ಪರಿಚ್ಛೇದದ ಅಡಿಯಲ್ಲಿ ಸ್ಪೀಕರ್​ಗೆ ನಿರ್ದೇಶನ ನೀಡಬೇಕು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಯು.ಟಿ. ಖಾದರ್, ಆರ್.ವಿ. ದೇಶಪಾಂಡೆ, ಹೆಚ್.ಕೆ. ಪಾಟೀಲ್. ಎಸ್.ಆರ್. ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button