Kannada NewsKarnataka NewsNationalPolitics

ಬಿಎಸ್ ಪಿ ರಾಜ್ಯಾಧ್ಯಕ್ಷ ಹತ್ಯೆ ಪ್ರಕರಣ: ಆರೋಪಿಯ ಎನ್‌ಕೌಂಟರ್ ಮಾಡಿದ ಪೊಲೀಸರು

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷ ಕೆ.ಆರ್ಮ್‌ ಸ್ಟ್ರಾಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಆರೋಪಿಯನ್ನು ಇಂದು ಎನ್‌ಕೌಂಟರ್ ಮೂಲಕ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರ್ಮ್‌ ಸ್ಟ್ರಾಂಗ್‌ನ ಹತ್ಯೆಯ ನಂತರ ಚೆನ್ನೈನ ಮಾಧವರಂ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪೊಲೀಸರು ಆರೋಪಿ ತಿರುವೆಂಗಡಂನನ್ನು ತನಿಖೆಗೆ ಕರೆದೊಯ್ದಿದ್ದರು ಎನ್ನಲಾಗಿದೆ.

Home add -Advt

ಈ ವೇಳೆ ಆರೋಪಿ ತಿರುವೆಂಗಡಂ ಬಚ್ಚಿಟ್ಟಿದ್ದ ಕಂಟ್ರಿ ಗನ್‌ನಿಂದ ಪೊಲೀಸ್ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು ತಮ್ಮ ಆತ್ಮರಕ್ಷಣೆಯ ಸಲುವಾಗಿ ಆತನ ಮೇಲೆ ಗುಂಡು ಹಾರಿಸಿದ್ದು, ಆರೋಪಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಎನ್‌ಕೌಂಟರ್‌ನಲ್ಲಿ ತಿರುವೆಂಗಡಂ ದೇಹದ ಬಲ ಭುಜ ಮತ್ತು ಎದೆಯ ಭಾಗದಲ್ಲಿ ಗುಂಡು ತಗುಲಿದೆ. ಬಳಿಕ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈನ ಸ್ವಾನ್ಸಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದು, ಆರೋಪಿ ವಿರುದ್ಧ ಈಗಾಗಲೇ 2 ಕೊಲೆ ಪ್ರಕರಣ ಸೇರಿದಂತೆ 5 ಪ್ರಕರಣಗಳು ದಾಖಲಾಗಿದ್ದವು ಎಂದು ವರದಿಯಾಗಿದೆ.

Related Articles

Back to top button