ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವಿ.ವಿ.ಪುರಂನಲ್ಲಿರುವ ಬಿಟಿಐ ಕಾಲೇಜಿನಲ್ಲಿ ನಡೆದಿದೆ.
ಜಯಂತ್ ರೆಡ್ದಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಎಂದಿನಂತೆ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿ ಕಾಲೇಜಿನ ನಾಲ್ಕನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ವಿದ್ಯಾರ್ಥಿ ಸಾವಿಗೆ ಕಾರಣ ತಿಳಿದುಬಂದಿಲ್ಲ. ಆದರೆ ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ