*ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ: ಸಚಿವೆ ಶಶಿಕಲಾ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ; ನಿಪ್ಪಾಣಿ: ‘ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಹಲವಾರು ಕೋಟಿ ರೂಪಾಯಿಗಳ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಈ ಅಭಿವೃದ್ದಿ ಕಾರ್ಯಗಳೇ ಈ ಬಾರಿಯ ಚುನಾವಣೆಯಲ್ಲಿ ನನಗೆ ಶ್ರೀರಕ್ಷೆಯಾಗಲಿವೆ’ ಎಂದು ಸ್ಥಳೀಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಸ್ಥಳೀಯ ವಿಧಾನಸಭಾ ಕ್ಷೇತ್ರದ ಬುದಲಮುಖ ಹಾಗೂ ಪಾಂಗೇರಿ(ಬಿ) ಗ್ರಾಮಗಳಲ್ಲಿ ಸೋಮವಾರ ಬಿರುಸಿನ ಪ್ರಚಾರ ಕೈಕೊಂಡು ಮಾತನಾಡಿದರು. ‘ಕಳೆದ ಎರಡು ಬಾರಿ ಶಾಸಕಿಯಾಗಿ ಬುದಲಮುಖ ಗ್ರಾಮದಲ್ಲಿ ೧೦.೪೦ ಕೋಟಿ ರೂ.ಗೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು, ಪಾಂಗೆರಿ(ಬಿ) ಗ್ರಾಮದಲ್ಲಿ ೧೩ ಕೋಟಿ ರೂ.ಗೂ ಅಧಿಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಗ್ರಾಮಗಳಲ್ಲಿ ರಸ್ತೆ, ಚರಂಡಿ, ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ, ಅಂಗನವಾಡಿ, ದೇವಸ್ಥಾನ ಜೀರ್ಣೋದ್ದಾರ ಹೀಗೆ ಹಲವಾರು ಕಾಮಗಾರಿಗಳನ್ನು ಕೈಗೊಂಡಿದ್ದೇನೆ. ಕ್ಷೇತ್ರದಲ್ಲಿ ಆಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಸದವಕಾಶ ನೀಡಿದ್ದೀರಿ. ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ನಾನು ಉಳಿಸಿಕೊಂಡಿದ್ದೇನೆ. ಈ ಎಲ್ಲಾ ಅಭಿವೃದ್ಧಿ ಕಾರ್ಯಗಳಿಂದಾಗಿ ಈ ಬಾರಿಯ ಚುನಾವಣೆಯಲ್ಲಿ ಮತದಾರರು ನನ್ನನ್ನು ಬೆಂಬಲಿಸಲಿದ್ದಾರೆ’ ಎಂದರು.
ಈ ಸಂದರ್ಭದಲ್ಲಿ ಬುದಲಮುಖ ಗ್ರಾಮ ಪಂಚಾಯಿತಿ ಸದಸ್ಯೆ ರೂಪಾಲಿ ಪಾಟೀಲ, ಕವಿತಾ ಕಾಂಬಳೆ, ಸದಾಶಿವ ಪಾಟೀಲ, ಬಾಳಾಸಾಹೇಬ ದೇವಡಕರ, ಧೋಂಡಿರಾಮ ಕನಸೆ, ಶಿವಾಜಿ ಕುಂಬಾರ, ಸರ್ಜೆರಾವ ಕಾಂಬಳೆ, ಬಾಳು ಪಾಟೀಲ, ದತ್ತಾ ನಾರೆ, ನಿವೃತ್ತಿ ಹೆಗಡೆ, ತುಕಾರಾಮ ಸಾಂಡುಗಡೆ, ಪಾಂಗಿರೆ(ಬಿ) ಗ್ರಾಮದ ಗ್ರಾಮ ಪಂಚಾಯತ ಸದಸ್ಯ ಆನಂದಾ ಕುಂಬಾರ, ಕವಿತಾ ದೇಶಮುಖ, ಶಾಮರಾವ ಜಾಧವ, ಶಿವಾಜಿ ಚೌಗಲೆ, ಶೋಭಾ ಜಾಧವ, ರೇಷ್ಮಾ ಕುಂಬಾರ, ಮೊದಲಾದವರು ಸಹಿತ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ