ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು 7ನೇ ಬಾರಿ ಬಜೆಟ್ ಮಂಡಿಸಿದ್ದು, ಬಜೆಟ್ ಮೇಲಿನ ಭಾಷಣ ಆರಂಭಿಸುತ್ತಿದ್ದಂತೆ ವಿಪಕ್ಷದ ನಾಯಕರು ಬಜೆಟ್ ಪ್ರತಿ ನೀಡುವಂತೆ ಒತ್ತಾಯಿಸಿ ಗದ್ದಲವೆಬ್ಬಿಸಿದ ಘಟನೆ ನಡೆದಿದೆ.
ಬಜೆಟ್ ಭಾಷಣ ಆರಂಭವಾಗುತ್ತಿದ್ದಂತೆ ಬಜೆಟ್ ಪ್ರತಿ ಸದನದ ಎಲ್ಲಾ ಸದಸ್ಯರಿಗೆ ನೀಡುವುದು ಸಂಪ್ರದಾಯ. ಆದರೆ, ಈ ಬಾರಿ ಬಜೆಟ್ ಮುಗಿಯುವವರಿಗೆ ಯಾರಿಗೂ ಬಜೆಟ್ ಪ್ರತಿ ನೀಡಲಾಗುವುದಿಲ್ಲ ಎಂದು ಹೇಳಿತ್ತು. ಹೀಗಾಗಿ ವಿಪಕ್ಷ ಸದಸ್ಯರು ಇದಕ್ಕೆ ಆಅಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಸರ್ಕಾರದ ಈ ನಿರ್ಧಾರವನ್ನು ಟೀಕಿಸಿದರು.
ಇದರಿಂದಾಗಿ ಸದನದಲ್ಲಿ ಕೆಲ ಗೊಂದಲದ ವಾತಾವರಣ ನಿರ್ಮಾನವಾಯಿತು. ಈ ವೇಳೆ ಸ್ಪಷ್ಟನೆ ನೀಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ಕಳೆದ ವರ್ಷ ನೀವು ಆರಂಭಿಸಿದ ಸಂಪ್ರದಾಯವನ್ನೇ ಈ ವರ್ಷ ನಾವು ಮುಂದುವರೆಸುತ್ತಿದ್ದೇವೆ ಎಂದು ಸ್ಪಷ್ಟೀಕರಣ ನೀಡಿದರು.
ಅಂತಿಮವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ಮೇರೆಗೆ ಎಲ್ಲರಿಗೂ ಬಜೆಟ್ ಪ್ರತಿ ನೀಡಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ