ಕೇಂದ್ರ ಬಜೆಟ್ ಗೆ ಸಿಎಂ ಯಡಿಯೂರಪ್ಪ ಮೆಚ್ಚುಗೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಜನಸ್ನೇಹಿ ಮತ್ತು ದೂರದೃಷ್ಟಿ ಬಜೆಟ್​​. ರಾಜ್ಯಕ್ಕೆ ಹಲವಾರು ಆನುಕೂಲಗಳನ್ನು ಘೋಷಿಸಲಾಗಿದೆ. ರೈತರ ಆದಾಯ ದ್ವಿಗುಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜನಸ್ನೇಹಿ ಬಜೆಟ್​​​ ಮಂಡಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರಿಗೆ ಅಭಿನಂದನೆಗಳು. ಹೊಸ ತೆರಿಗೆ ಹಾಕದಂತೆ ವಿನೂತನ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್​​ನಲ್ಲಿ ರೈತರು, ಬಡವರು ಮತ್ತು ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.

ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಜೆಟ್​​ನಲ್ಲಿ ಅನುಕೂಲ ಮಾಡಿಕೊಡಲಾಗಿದೆ. ರೈತರು, ಬಡವರು ಮತ್ತು ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ವಿದ್ಯುತ್ ಸ್ವಾವಲಂಬನೆ ಸಾಧಿಸಲು ಕ್ರಮ ಕೈಗೊಳ್ಳುವ ಯೋಜನೆ ಘೋಷಿಸಲಾಗಿದೆ. ಸೌರ ಪಂಪ್ ಸೆಟ್ ಒದಗಿಸಲು ಯೋಜನೆ ಮತ್ತು ಆಯುಷ್ಮಾನ್ ಭಾರತ್ ಯೋಜನೆಗೂ ಒತ್ತು ನೀಡಲಾಗಿದೆ. ದೇಶದ ಜಿಡಿಪಿ ಪ್ರಗತಿಗೆ ಈ ಬಜೆಟ್ ಕಾರಣವಾಗಲಿದೆ.

ಬೆಂಗಳೂರು ಅರ್ಬನ್ ರೈಲು ಯೋಜನೆಗೆ ಅನುಮೋದನೆ ಸಿಕ್ಕಿದೆ. ಇದರಿಂದ ರಾಜ್ಯದ ಬಹಳ ವರ್ಷದ ಬೇಡಿಕೆ ಈಡೇರಿದೆ. ಸದ್ಯದಲ್ಲೇ ಕೇಂದ್ರ ಹಾಗೂ ರಾಜ್ಯದ ಸಹಯೋಗದಲ್ಲಿ ಮೇಲಿನ ಎಲ್ಲಾ ಯೋಜನೆಗಳು ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button