Kannada NewsLatestNational

*ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ರಾಜ್ಯ ಸರ್ಕಾರಿ ಬಸ್ ಹಾಗೂ ಓಮ್ನಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲಿಸರು ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ.

Home add -Advt

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಸಾರಿಗೆಯ ಎಕ್ಸ್ ಪ್ರೆಸ್ ಬಸ್ ಹಾಗೂ ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಓರ್ವ ಮಹಿಳೆ ಸೇರಿ ಐವರು ಸಾವನ್ನಪ್ಪಿದ್ದಾರೆ.

ರಿತಿಕಾ (32), ಮೊಹಮ್ಮದ್ ಫಿರೋಜ್ (37), ಬಸ್ ಚಾಲಕ ಕೆ ಎಲುಮಲೈ(47), ಬಿ.ಅಜಿತ್ (25), ಓಮ್ನಿ ಬಸ್ ಚಾಲಕ ಎಸ್.ಸೈಯದ್ ಮೃತರು. ಗಾಯಾಳುಗಳನ್ನು ತಿರುಪತ್ತೂರು ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆ ಹಾಗೂ ವೆಲ್ಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button