ಪ್ರಗತಿವಾಹಿನಿ ಸುದ್ದಿ: ಉತ್ತಮ ಬಜೆಟ್. ರೈತರು, ಮಹಿಳೆಯರು, ಜನಸಾಮಾನ್ಯರು ಮತ್ತು ಹಿರಿಯ ನಾಗರಿಕರಿಗೆ ಅನುಕೂಲಕರವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಕೇಂದ್ರ ಬಜೆಟ್ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಎಸ್‌ಸಿ ಮತ್ತು ಎಸ್‌ಟಿ ಮಹಿಳೆಯರಿಗೆ, ನವೋದ್ಯಮಗಳಿಗೂ ಪ್ರಯೋಜನವಾಗಿದೆ. ಆದಾಯ ತೆರಿಗೆ ಸ್ಲ್ಯಾಬ್ ಅನ್ನು 12 ಲಕ್ಷಕ್ಕೆ ವಿಸ್ತರಿಸಲಾಗಿದೆ, ಇದು ಮಧ್ಯಮ ವರ್ಗದ ಜನರಿಗೆ ಅನುಕೂಲಕರವಾಗಿದೆ ಎಂದಿದ್ದಾರೆ.
ದಿನಗೂಲಿ (ಗಿಗ್) ಕೆಲಸಗಾರರಿಗೆ ಈ ಬಜೆಟ್‌ನಿಂದ ಹಲವು ಸಹಾಯಗಳು ಸಿಗುತ್ತವೆ. ಕ್ಯಾನ್ಸರ್ ಔಷಧಗಳಿಗೆ ವಿನಾಯಿತಿ ನೀಡಲಾಗಿದೆ. ಒಟ್ಟಾರೆಯಾಗಿ ಕೃಷಿ, ಮೂಲಸೌಕರ್ಯ, ಕೈಗಾರಿಕೆ, ಆರೋಗ್ಯ ಮತ್ತು ಶಿಕ್ಷಣಕ್ಕೂ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ