Belagavi NewsBelgaum News

*ಇದೊಂದು ಉತ್ತಮ ಬಜೆಟ್: ಡಾ.ಸೋನಾಲಿ ಸರ್ನೋಬತ್*

ಪ್ರಗತಿವಾಹಿನಿ ಸುದ್ದಿ: ಉತ್ತಮ ಬಜೆಟ್. ರೈತರು, ಮಹಿಳೆಯರು, ಜನಸಾಮಾನ್ಯರು ಮತ್ತು ಹಿರಿಯ ನಾಗರಿಕರಿಗೆ ಅನುಕೂಲಕರವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಕೇಂದ್ರ ಬಜೆಟ್ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Home add -Advt

ಎಸ್‌ಸಿ ಮತ್ತು ಎಸ್‌ಟಿ ಮಹಿಳೆಯರಿಗೆ, ನವೋದ್ಯಮಗಳಿಗೂ ಪ್ರಯೋಜನವಾಗಿದೆ. ಆದಾಯ ತೆರಿಗೆ ಸ್ಲ್ಯಾಬ್ ಅನ್ನು 12 ಲಕ್ಷಕ್ಕೆ ವಿಸ್ತರಿಸಲಾಗಿದೆ, ಇದು ಮಧ್ಯಮ ವರ್ಗದ ಜನರಿಗೆ ಅನುಕೂಲಕರವಾಗಿದೆ ಎಂದಿದ್ದಾರೆ.

ದಿನಗೂಲಿ (ಗಿಗ್) ಕೆಲಸಗಾರರಿಗೆ ಈ ಬಜೆಟ್‌ನಿಂದ ಹಲವು ಸಹಾಯಗಳು ಸಿಗುತ್ತವೆ. ಕ್ಯಾನ್ಸರ್ ಔಷಧಗಳಿಗೆ ವಿನಾಯಿತಿ ನೀಡಲಾಗಿದೆ. ಒಟ್ಟಾರೆಯಾಗಿ ಕೃಷಿ, ಮೂಲಸೌಕರ್ಯ, ಕೈಗಾರಿಕೆ, ಆರೋಗ್ಯ ಮತ್ತು ಶಿಕ್ಷಣಕ್ಕೂ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

Related Articles

Back to top button