ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದ್ದು, ಫೆಬ್ರವರಿ 10ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ಫೆಬ್ರವರಿ 10ರಿಂದ ಬಜೆಟ್ ಅಧಿವೇಶನ ಆರಂಭಿಸಲು ನಿರ್ಧರಿಸಲಾಗಿದೆ. ಅಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಡಲಿದ್ದಾರೆ. ನಂತರದ ದಿನಗಳಲ್ಲಿ ಅವರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.
ಫೆಬ್ರವರಿ 17ರಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಆಯವ್ಯಯ ಮಂಡಿಸಲಿದ್ದಾರೆ. ಎಷ್ಟುದಿನ ಅಧಿವೇಶನ ನಡೆಸಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಬ್ಯುಸಿನೆಸ್ ಅಡ್ವೈಸರಿ ಕಮಿಟಿ ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ 100 ಅಂಬೇಡ್ಕರ್ ಹಾಸ್ಟೇಲ್ ನಿರ್ಮಾಣಕ್ಕೆ 600 ಕೋಟಿ ನೀಡಲು ಸಂಪುಟ ಸಭೆ ಅನುಮತಿ ನೀಡಿದೆ. ಕಲ್ಲತ್ತಿ ಡ್ಯಾಂ ಗೆ 20 ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
*ಮಂತ್ರಿ ಸ್ಥಾನದ ಆಸೆಯನ್ನೇ ಬಿಟ್ಟಿದ್ದೇನೆ ಎಂದ ಮಾಜಿ ಸಚಿವ*
https://pragati.taskdun.com/k-s-eshwarappabjpshivamoggapressmeet/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ