
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ಸಂಸತ್ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಆದರೆ ವಿಪಕ್ಷಗಳು ಜಂಟಿ ಅಧಿವೇಶನ ಬಹಿಷ್ಕರಿಸಲು ನಿರ್ಧರಿಸಿವೆ.
ಕೇಂದ್ರ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್, ಎನ್ ಸಿಪಿ, ಜೆಡಿಎಸ್, ನ್ಯಾಷನಲ್ ಕಾನ್ಫರೆನ್ಸ್, ಆಪ್ ಸೇರಿದಂತೆ 16 ಪ್ರತಿಪಕ್ಷಗಳು ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿವೆ.
ಈ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಟ್ವೀಟ್ ಮಾಡಿದ್ದು, ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಜೆಡಿಎಸ್ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.