ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಜೆಟ್ ಮಂಡನೆ ಕೇವಲ ಆರ್ಥಿಕ ಬೆಳವಣಿಗೆಯಲ್ಲ, ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಬೇಕು ಎಂದರು.
ಸಂಸತ್ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ, ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಕಲಾಪದಲ್ಲಿ ಕೊರೊನಾ ಲಸಿಕೆ ಬಗ್ಗೆ ಹೆಚ್ಚು ಪ್ರಸ್ತಾಪವಾಗಬೇಕು. ಎಲ್ಲಾ ಸಂಸದರಿಗೂ ಚರ್ಚಿಸಲು ಅವಕಾಶವಿದೆ. ಎಲ್ಲರೂ ಬಜೆಟ್ ಅಧಿವೇಶನಕ್ಕೆ ಸಹಕರಿಸುವ ವಿಶ್ವಾಸವಿದೆ ಎಂದು ಹೇಳಿದರು.
ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಸತ್ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದು, ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020-21ನೇ ಸಾಲಿನ ಆರ್ಥಿಕ ಸಮೀಕ್ಷೆ ಪ್ರಸ್ತುತಪಡಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ