ಸಂಸತ್ ಬಜೆಟ್ ಅಧಿವೇಶನ ಆರಂಭ

ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡುತ್ತಿದ್ದಾರೆ. ಬಳಿಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2019-20ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಸದನದಲ್ಲಿ ಮಂಡಿಸಲಿದ್ದು, ನಾಳೆ ಲೋಕಸಭೆಯಲ್ಲಿ ಅವರು ಪ್ರಸಕ್ತ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ.

ಅಧಿವೇಶನಕ್ಕೂ ಮೊದಲು ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಾಲಿದೆ. ನಾಳೆ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಪ್ರಸಕ್ತ ಕಲಾಪದಲ್ಲಿ ಆರ್ಥಿಕ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ನಡೆಯಲಿದೆ. ಬಜೆಟ್ ನಲ್ಲಿ ಎಲ್ಲಾ ವರ್ಗಗಳಿಗೂ ಆದ್ಯತೆ ನೀಡಲಾಗುವುದು. ವಿಪಕ್ಷಗಳು ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು.

ಸಂಸತ್ತಿನ ಮೊದಲ ಹಂತದ ಅಧಿವೇಶನ ಫೆಬ್ರವರಿ 11ರಂದು ಮುಕ್ತಾಯವಾಗಲಿದ್ದು ಅಧಿವೇಶನದ ಎರಡನೇ ಭಾಗ ಮಾರ್ಚ್ 2ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ.

Budget session,PM Modi,President Ramanath kovind

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button