
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ವಿಧಾನಮಂದಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಿದ್ಧತೆ ನಡೆಸಿದ್ದರೆ, ಮತ್ತೊಂದೆಡೆ ಆಡಳಿತಾರೂಢ ಕಾಂಗ್ರೆಸ್ ನಾಯಕರು ವಿಪಕ್ಷಗಳಿಗೆ ತಕ್ಕ ಉತ್ತರ ನೀಡಲು ತಯಾರಿ ಮಾಡಿಕೊಂಡಿದ್ದಾರೆ.
ಅಧಿವೇಶನದ ಮೊದಲ ದಿನವೇ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸುವುದಾಗಿ ಹೇಳಿದೆ. ವಿವಿಧ ಸಂಘಟನೆಗಳಿದಲೂ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ವಿಧಾನಸೌಧದ ಸುತ್ತ ಭದ್ರತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸರು, ಕೆ ಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ. ಮಾ.7ರಂದು ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಅಂದು ಶಾಸಕರಭವನದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ