ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆಯ ಸಂಭ್ರಮದ ದಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಸಲಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಅವರ ಕಾವೇರಿ ನಿವಾಸಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿತರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಯವರು ಭೇಟಿ ನೀಡಿ ಶುಭಕೋರಿದರು.
ಸಿಎಂ ಯಡಿಯೂರಪ್ಪನವರಿಗೆ ಆರತಿ ಬೆಳಗಿ ಮಹಿಳಾ ಜನಪ್ರತಿನಿಧಿಗಳು ಶುಭ ಕೋರಿದ್ದು ವಿಶೇಷವಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎದುರಾದ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿದ್ದೇವೆ. ಇಂದು ನಾಡಿನ ಜನತೆಗೆ ಒಳಿತಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಉತ್ತಮ ಬಜೆಟ್ ಅನ್ನು ಮಂಡಿಸಲಿದ್ದಾರೆ. ವಿಶೇಷವಾಗಿ ಮಹಿಳೆಯರಿಗೂ ಬಜೆಟ್‌ನಲ್ಲಿ ಪ್ರಾಧಾನ್ಯತೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ರೂಪಾಲಿ ನಾಯ್ಕ, ವಿಧಾನಪರಿಷತ ಸದಸ್ಯರಾದ ಭಾರತಿ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ