Kannada NewsKarnataka NewsNationalPolitics

*ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ಲಕ್ಕೋದ ಟ್ರಾನ್ಸೆರ್ಟ್ ನಗರದಲ್ಲಿ ಕಟ್ಟಡ ಕುಸಿತ ಸಂಭವಿಸಿದ್ದು ಈ ಘಟನೆಯಲ್ಲಿ ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸದ್ಯ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಶನಿವಾರ ಸಂಜೆ ಲಕ್ಕೋದ ಟ್ರಾನ್ಸ್‌ಪೋರ್ಟ್ ನಗರದಲ್ಲಿ ಬಹು ಅಂತಸ್ತಿನ ಕಟ್ಟಡವೊಂದು ಧಿಡೀರ್ ಕುಸಿದು ಬಿದ್ದಿದೆ. ಹೀಗಾಗಿ ಕಟ್ಟಡದ ಅವಶೇಷದ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇದೀಗ ಘಟನಾ ಸ್ಥಳದಲ್ಲಿ ಸದ್ಯ ಸಿಲುಕಿರುವವರನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನಿರಂತರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button