Karnataka News

*ಪಾಳು ಬಿದ್ದ ಕಟ್ಟಡ ಕುಸಿತ: ಮೂವರು ಮಹಿಳೆಯರು ಸಾವು*

ಪ್ರಗತಿವಾಹಿನಿ ಸುದ್ದಿ: ಪಾಳು ಬಿದ್ದ ಕಟ್ಟಡ ಏಕಾಏಕಿ ಕುಸಿದು ಬಿದ್ದು ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.

ಕಟ್ಟಡದ ಕೆಳಗೆ ಮಹಿಳೆಯರು ಹೂವು, ಹಣ್ಣು, ತರಕಾರಿ ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಸಜ್ಜ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಇದೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button