Kannada NewsKarnataka NewsLatest

*ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ; ಹೋರಿ ತಿವಿದು ಯುವಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಹೋರಿ ಬೆದರಿಸುವ ಸ್ಪರ್ಧಿಯಲ್ಲಿ ದುರಂತವೊಂದು ಸಂಭವಿಸಿದ್ದು, ಏಕಾಏಕಿ ಯುವಕನತ್ತ ನುಗ್ಗಿ ಹೋರಿ ತಿವಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆದಿತ್ತು. ಸ್ಪರ್ಧೆ ನೋಡಲೆಂದು ಬಂದಿದ್ದ ಯುವಕನಿಗೆ ಹೋರಿ ತಿವಿದು ಗಂಭೀರವಾಗಿ ಗಾಯಗೊಂಡಿದ್ದ.

Home add -Advt

ದಾವಣಗೆರೆ ಮೂಲದ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ಪುನೀತ್ ಶಿಕಾರಿಪುರ ಪಟ್ಟಣದ ಹಾಸ್ಟೇಲ್ ನಲ್ಲಿದ್ದುಕೊಂಡು ಐಟಿಐ ಓದುತ್ತಿದ್ದ.

ಹೋರಿ ಬೆದರಿಸುವ ಸ್ಪರ್ಧೆ ನೋಡಲೆಂದು ಹೋದವನಿಗೆ ಹೋರಿ ತಿವಿದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ.

ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button