Belagavi NewsBelgaum NewsCrimeKannada NewsKarnataka NewsNational
*ಕಾರಿಗೆ ಗುದ್ದಿದ ಬುಲೇಟ್ ಬೈಕ್: ಕಾರು ಚಾಲಕ ಸಾವು*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮೇಲೆ ನಡೆದಿದೆ.
ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೊಹ್ಮದ್ ಈರ್ಪಾನ್ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂ ಆಗಿದೆ. ಅಪಘಾತದ ಹಿನ್ನೆಲೆ ಬೈಕ್ ಸವಾರರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿತ್ತೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ ಮೇಲೆ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.



