Latest

ನಿವಾರ್ ಬೆನ್ನಲ್ಲೇ ಅಪ್ಪಳಿಸಲಿದೆ ಮತ್ತೊಂದು ಚಂಡಮಾರುತ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ನಿವಾರ್ ಚಂಡಮಾರುತದ ಬೆನ್ನಲ್ಲೇ ತಮಿಳುನಾಡಿಗೆ ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಡಿಸೆಂಬರ್ 2 ಹಾಗೂ 3ರಂದು ಕೇರಳ ಹಾಗೂ ತಮಿಳುನಾಡಿಗೆ ಮತ್ತೊಂದು ಚಂಡಮಾರುತ ಅಪ್ಪಳಿಸಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ಡಿಸೆಂಬರ್ 2ರಂದು ಶ್ರೀಲಂಕಾ ಕರಾವಳಿ ಪ್ರದೇಶವನ್ನು ಹಾದು ಡಿಸೆಂಬರ್ 3ರಂದು ಬೆಳಿಗ್ಗೆ ತಮಿಳುನಾಡಿಗೆ ಅಪ್ಪಳಿಸಲಿದೆ.

Home add -Advt

ಈ ಹಿನ್ನೆಲೆಯಲ್ಲಿ ಡಿ.3 ಹಾಗೂ 4ರಂದು ತಮಿಳುನಾಡು, ಪುದುಚೆರಿ, ಕೇರಳ ಹಾಗೂ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ಇನ್ನು ಕರ್ನಾಟಕದ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Related Articles

Back to top button