
ಪ್ರಗತಿವಾಹಿನಿ ಸುದ್ದಿ, ಜಾಂಬೋಟಿ – ಜಾಂಬೋಟಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸುಮಾರು 26ಜನರು ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಜರುಗಿದೆ. ಈ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 26 ಜನ ಪ್ರವಾಸಿಗರಿಗೆ ಗಾಯಗಳಾಗಿದ್ದು ಇವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಸ್ ಹೈದ್ರಾಬಾದ್ ನಿಂದ ಗೋವಾ ಕಡೆ ಹೊರಟಿರುವ ಸಂದರ್ಭದಲ್ಲಿ ಈ ಅಪಘಾತ ಜಾಂಬೋಟಿ ಬಳಿ ಸಂಭವಿಸಿದೆ. ಖಾನಾಪುರ ಪೋಲಿಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ