
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಬೆಳಗಾವಿಯ ಹೊರ ವಲಯದಲ್ಲಿ ಸಾರಿಗೆ ಬಸ್ ನ ಸ್ಟೇರಿಂಗ್ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದಿದ್ದು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಹೊರವಲಯದಲ್ಲಿ ಘಟನೆ ಸಂಭವಿಸಿದೆ. ಬೆಳಗುಂದಿಯಿಂದ ಬೆಳಗಾವಿಗೆ ಬರೋವಾಗ ಅವಘಡ ಸಂಭವಿಸಿದ್ದು, ಈ ಅಪಘಾತದಲ್ಲಿ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಬಸ್ ನಲ್ಲಿ 15ಕ್ಕೂ ಅಧಿಕ ಜನರು ಪ್ರಯಾಣ ಮಾಡುತ್ತಿದ್ದರು. 10 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.