Karnataka NewsLatest

*ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದ ಬಸ್: ಓರ್ವ ಪ್ರಯಾಣಿಕ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಬಿದ್ದಿದ್ದು, ಬಸ್ ನೊಳಗೆ ಸಿಲುಕಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಖಾಸಗಿ ಬಸ್ ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದೆ. ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಉರುಳಿ ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಬಳಿ ಈ ಗಹ್ಟನೆ ನಡೆದಿದೆ. ಬಸ್ ಒಳಗೆ ಸಿಲುಕಿದ್ದ ಓರ್ವ ಪ್ರಯಾಣಿಕ ಬಸ್ ನಲ್ಲೇ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. 25 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿ ಸಿಲುಕಿ ಸಾವನ್ನಪ್ಪಿರುವ ಪ್ರಯಾಣಿಕನ ಮೃತದೇಹವನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಘಟನೆ ನಡೆದಿದೆ.

Home add -Advt

Related Articles

Back to top button