ಪ್ರಗತಿವಾಹಿನಿ ಸುದ್ದಿ; ತುಮಕೂರು: ಪಳವಳ್ಳಿ ಕಟ್ಟೆ ಬಳಿ ನಡೆದಿದ್ದ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ತುಮಕೂರಿನಲ್ಲಿ ಮಾತನಾಡಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ಪಾವಗಡ ಬಳಿಯ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಐದು ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ ಹಾಗು ವೈಯಕ್ತಿಕವಾಗಿ ನಾನು 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು. ಅಲ್ಲದೇ ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೀಡಲಾಗುವುದು ಎಂದರು.
ಬಸ್ ಅಪಘಾತ ಪ್ರಕರಣದ ಬೆನ್ನಲ್ಲೇ ಪಾವಗಡದಲ್ಲಿ ಖಾಸಗಿ ಬಸ್ ಗಳ ಲೈಸನ್ಸ್ ರದ್ದು ಮಾಡಲು ಸೂಚಿಸಲಾಗಿದೆ. ಸರ್ಕಾರಿ ಬಸ್ ಓಡಾಟ ಇಲ್ಲದ ಕಾರಣಕ್ಕೆ ಖಾಸಗಿ ಬಸ್ ನಲ್ಲಿ ಜನರು ಪ್ರಯಾಣಿಸುವಂತಾಗಿದೆ ಓವರ್ ಲೋಡ್ ಹಾಗೂ ಅತಿಯಾದ ವೇಗವೇ ಘಟನೆಗೆ ಕಾರಣ. ಪಾವಗಡದಲ್ಲಿ ಸರ್ಕಾರಿ ಬಸ್ ಓಡಾಟಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹಿಜಾಬ್ ವಿವಾದ; ತೀರ್ಪು ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ