Latest

*ಭೀಕರ ಅಪಘಾತ: ಬಸ್ ಚಾಲಕನ ಕಾಲುಗಳು ಕಟ್; ನಾಲ್ವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮಳೆ ಅಬ್ಬರದ ನಡುವೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಸರ್ಕಾರಿ ಬಸ್ ವೊಂದು ಮರಕ್ಕೆ ಡಿಕ್ಕಿಯಾಗಿ ಚಾಲಕನ ಎರಡೂ ಕಾಲುಗಳು ಕಟ್ ಆಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

Home add -Advt

ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಎರ್ಡೂ ಕಾಲುಗಳು ತುಂಡಾಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button