Kannada NewsKarnataka NewsLatest

*ಮರಕ್ಕೆ ಡಿಕ್ಕಿ ಹೊಡೆದ ಬಸ್: 10 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರಿಗೆ ಗಾಯಗಳಾಗಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಗೀಜಿಹಳ್ಳಿ ಬಳಿ ನಡೆದಿದೆ.

ಮಡಿಕೇರಿಯತ್ತ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕಿ ಹೊಡೆದಿದೆ. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ.

Home add -Advt

ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಅರಸಿಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button