Karnataka News

*ಕೆಳಗೆ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್: ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ನಿಂದ ಬಿದ್ದ ವಿದ್ಯಾರ್ಥಿ ಮೇಲೆಯೇ ಬಸ್ ಹರಿದು ಹೋದ ಪರಿಣಾಮ ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

16 ವರ್ಷದ ಯಶವಂತ್ ಮೃತ ವಿದ್ಯಾರ್ಥಿ. ಬಸ್ ನ ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ, ಆಯ ತಪ್ಪಿ ಕೆಳಗೆ ಬಿದ್ದಿದ್ದು, ಆತನ ಮೇಲೆಯೇ ಬಸ್ ಹರಿದು ಹೋಗಿದೆ.

ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button