
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ನಿಂದ ಬಿದ್ದ ವಿದ್ಯಾರ್ಥಿ ಮೇಲೆಯೇ ಬಸ್ ಹರಿದು ಹೋದ ಪರಿಣಾಮ ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
16 ವರ್ಷದ ಯಶವಂತ್ ಮೃತ ವಿದ್ಯಾರ್ಥಿ. ಬಸ್ ನ ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ, ಆಯ ತಪ್ಪಿ ಕೆಳಗೆ ಬಿದ್ದಿದ್ದು, ಆತನ ಮೇಲೆಯೇ ಬಸ್ ಹರಿದು ಹೋಗಿದೆ.
ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




