
ಪ್ರಗತಿವಾಹಿನಿ ಸುದ್ದಿ; ಲಖನೌ: ಮದುವೆ ಮನೆಗೆ ಜನರನ್ನು ಕರೆತರುತ್ತಿದ್ದ ಬಸ್ ಪಲ್ಟಿಯಾಗಿ ಐವರು ಸಾವನ್ನಪ್ಪಿದ್ದು, 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಲ್ಲಿ ನಡೆದಿದೆ.
ಬಸ್ ನಲ್ಲಿ 40 ಜನರು ಪ್ರಯಾಣಿಸುತ್ತಿದ್ದರು. ಬಸ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಬಸ್ ಪಲ್ಟಿಯಾಗಿ ಬಿದ್ದಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಡಿ ಹಲವುರು ಸಿಲುಕಿಕೊಂಡಿದ್ದು, 15 ಜನರು ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.